February 4, 2026

ದ‌‌.ಕ.ಜಿಲ್ಲೆಯ 59 ಸಾಧಕರು, 24 ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0
image_editor_output_image540332236-1730453044109.jpg

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶಸ್ತಿ ಪ್ರಧಾನ ಮಾಡಿ ರಾಜ್ಯೋತ್ಸವ ಸಂದೇಶ ನೀಡಿದರು. ಅತ್ಯಧಿಕ ಜಿಎಸ್ ಟಿ ಸಂಗ್ರಹಿಸುವ ರಾಜ್ಯ ಕರ್ನಾಟಕವಾಗಿದ್ದರೂ ರಾಜ್ಯಕ್ಕೆ ಸಿಗಬೇಕಾದ ಪಾಲು ಸಿಗದ ಕಾರಣ ರಾಜ್ಯ ತೀವ್ರ ಆರ್ಥಿಕ ಅನ್ಯಾಯಕ್ಕೆ ಗುರಿಯಾಗಿದೆ ಎಂದರು.

ಕರ್ನಾಟಕವು ಜಿಎಸ್ ಟಿ ಸಂಗ್ರಹದಲ್ಲಿ ದೇಶದಲ್ಲೇ ಎರಡನೆ ಸ್ಥಾನದಲ್ಲಿದ್ದರೂ, ಹಣಕಾಸು ಆಯೋಗದಿಂದ ಸಿಗಬೇಕಾದ ಹಣದಲ್ಲಿ ತೀವ್ರ ಕಡಿತವಾಗಿದೆ. ನಮ್ಮ ರಾಜ್ಯದಲ್ಲಿ ತೆರಿಗೆಯನ್ನು ರಾಜ್ಯಕ್ಕೆ ಅನುಕೂಲಕ್ಕೆ ತಕ್ಕಂತೆ ವಿಧಿಸುವ ಅಧಿಕಾರ ಜಿಎಸ್ಪಿಯಿಂದ ಇಲ್ಲವಾಗಿದೆ. ಇದಕ್ಕೆ ಪರಿಹಾರ ರೂಪದಲ್ಲಿ ಸಿಗಬೇಕಾದ ಹಣವೂ ಸಿಕ್ಕಿಲ್ಲ. ಇಂತಹ ಪರಿಸ್ಥಿತಿ ಯಾವ ರಾಜ್ಯಕ್ಕೂ ಬರಬಾರದು. ಕರ್ನಾಟಕ ರಾಜ್ಯೋತ್ಸವದ ಈ ದಿನದಂದು ಇದನ್ನು ನೆನಪಿಸಬೇಕಿದೆ. ನಮ್ಮ ಶ್ರಮದ ಪಾಲನ್ನು ಯಾರೋ ಅನ್ಯಾಯವಾಗಿ ಕಸಿದುಕೊಳ್ಳುತ್ತಿದ್ದಾರೆಂಬ ಭಾವನೆ ರಾಜ್ಯಗಳಿಗೆ ಬರಬಾರದು. ಕರ್ನಾಟಕ ಸರಕಾರ ಇದನ್ನು ಪ್ರಶ್ನಿಸಿದೆ. ರಾಜ್ಯದ ಹಿತಾಸಕ್ತಿ ಪರವಾಗಿ ಗಟ್ಟಿಯಾಗಿ ನಿಂತಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!