ವಿಟ್ಲ: ಹೊರೈಝನ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಇವರು ಧ್ವಜಾರೋಹಣ ಮಾಡಿದರು.
ಮಸೀದಿಯ ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ ವೇದಿಕೆಯಲ್ಲಿದ್ದರು.
ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು.
ಶಿಕ್ಣಕಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.




