ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ
ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.


ಸ

ಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್‌ಡಿಪಿಐ ಸಂಕಲ್ಪ, ಒಲವಿನ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನಡೆಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಅತಿಥಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಉಜಿರೆ ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಆಲಿ, ಕಾರ್ಯದರ್ಶಿ ಸಾದಿಕ್ ಲಾಯಿಲ, ಮರ್ಷದ್ ಉಜಿರೆ, ಅಶ್ರಫ್ ಕಟ್ಟೆ, ಪಕ್ಷದ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷೇತ್ರ ಸಮಿತಿ ಸದಸ್ಯರಾದ ಸಹಲ್ ನಿರ್ಸಾಲ್ ಸ್ವಾಗತಿಸಿ, ಧನ್ಯವಾದಗೈದರು.




