March 18, 2026

ಮಂಗಳೂರು: ಮೈಮೇಲೆ ಬಿಸಿ ಟೀ ಚೆಲ್ಲಿಕೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ

0
IMG-20241101-WA0007.jpg

ಮಂಗಳೂರು: ಪಾತ್ರೆಯಲ್ಲಿದ್ದ ಬಿಸಿ ಟೀ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.

ಮೃತ ಮಗುವನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ರಾಜೇಶ್ ಹಾಗೂ ಅಶ್ವಿನಿ ದಂಪತಿ ಪುತ್ರ ಅಥರ್ವ (2) ಎಂದು ಗುರುತಿಸಲಾಗಿದೆ.

ರಾಜೇಶ್ ಅವರ ನೆರೆಮನೆ ನಿವಾಸಿ ಕಳೆದ ವಾರ ಮೃತಪಟ್ಟಿದ್ದರು. ಅವರ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಂಬಂಧಿಕರಿಗೆ ಅಶ್ವಿನಿ ಟೀ ಮಾಡಿಟ್ಟಿದ್ದರು. ಟೀ ಇರುವ ಪಾತ್ರೆಯನ್ನು ಮಗು ತನ್ನ ಮೈಮೇಲೆ ಬೀಳಿಸಿಕೊಂಡು ಗಾಯವಾಗಿತ್ತು. ಕಳೆದೊಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!