ಪುತ್ತೂರು: ಶಸ್ತ್ರಚಿಕಿತ್ಸೆಯ ವೇಳೆ ಹೃದಯಾಘಾತ: ಕಡಬ ನಿವಾಸಿ ಮೃತ್ಯು

ಪುತ್ತೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಶನಿವಾರ ನಡೆದಿರುವುದಾಗಿ ವರದಿಯಾಗಿದೆ.
ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತಪಟ್ಟ ಯುವಕ.
ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.