ಚುನಾವಣಾ ಪ್ರಚಾರದ ವೇಳೆ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ: ಇಂದು ಚುನಾವಣಾ ಪ್ರಚಾರದ ವೇಳೆ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬೈಕ್ ಮೇಲಿಂದ ಬಿದ್ದ ಘಟನೆ ನಡೆಯಿತು.
ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್ ಕುಮಾರಸ್ವಾಮಿ ಬೈಕ್‌ನಿಂದ ಬಿದ್ದಿದ್ದಾರೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎಂದು ತಿಳಿಬಂದಿದೆ.
ಬೈಕ್ ಮೇಲಿಂದ ಬಿದ್ದ ತಕ್ಷಣ ಅಕ್ಕ ಪಕ್ಕದಲ್ಲಿದ್ದ ಕಾರ್ಯಕರ್ತರು ಕೂಡಲೇ ನಿಖಿಲ್ ಕುಮಾರಸ್ವಾಮಿ ಅವರನ್ನು ಮೇಲಕ್ಕೆ ಅತಿ ಉಪಚರಿಸಿದ್ದಾರೆ. ಸ್ವಲ್ಪ ಹೊತ್ತು ಅಲ್ಲಿಗೆ ವಿಶ್ರಾಂತಿ ಪಡೆದು ಬಳಿಕ ಮತ್ತೆ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಅವರಿಗೆ ಯಾವುದೇ ರೀತಿಯಾದಂತಹ ಗಂಭೀರವಾದ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.