July 12, 2026

ಕಟಪಾಡಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಢಿಕ್ಕಿ: ಹಲವರಿಗೆ ಗಂಭೀರ ಗಾಯ

0
image_editor_output_image2009542278-1730616261018.jpg

ಕಟಪಾಡಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಟೂರಿಸ್ಟ್ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಕೊಲ್ಲೂರಿನತ್ತ ತೆರಳುತ್ತಿದ್ದ ತಮಿಳುನಾಡಿನ ಟೂರಿಸ್ಟ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟೂರಿಸ್ಟ್ ವಾಹನ ಜಖಂ ಗೊಂಡಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!