February 4, 2026

ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

0
image_editor_output_image467415451-1730625074518.jpg

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನ.3ರಂದು) ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ. ಅವರ ಅಪಾರ್ಟ್‌ ಮೆಂಟ್‌ ನಿಂದ ಕೊಳತೆ ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಸಾಲಗಾರರ ಕಿರುಕುಳದಿಂದ ಬೇಸತ್ತು ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್‌ ಮೆಂಟ್‌ನಲ್ಲಿ ಫ್ಯಾನಿಗೆ ನೇಣುಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!