February 4, 2026

ಉಡುಪಿ: ಬೈಕ್ ಗೆ ಟ್ಯಾಂಕರ್ ಢಿಕ್ಕಿ, ಬೈಕ್‌ ಸವಾರ ಮೃತ್ಯು

0
image_editor_output_image-1291133350-1730628513031.jpg

ಉಡುಪಿ: ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ.

ಮೃತನನ್ನು ಹರೀಶ್ ಕುಮಾರ್(45) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಟ್ಯಾಂಕ‌ರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

Leave a Reply

Your email address will not be published. Required fields are marked *

error: Content is protected !!