July 12, 2026

ಬೆಳ್ತಂಗಡಿ: ಮನೆಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

0
image_editor_output_image1055365357-1730633717919.jpg

ಬೆಳ್ತಂಗಡಿ: ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿಯ ನಿವಾಸಿ ನಿತಿನ್ (26) ಆತ್ಯಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.

ರಾತ್ರಿ 8 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಮಾಡಿಕೊಂಡಿದ್ದು ಮನೆಯಲ್ಲಿ ನಡೆದ ಕೌಟುಂಬಿಕ ಕಲಹ ಕಾರಣ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಇವರು ನಿನ್ನೆ ಕೂಡ ಕುಂಟಿನಿಯಲ್ಲಿ ಮೀನು ವ್ಯಾಪಾರ ಮಾಡಿ ನಂತರ ತನ್ನ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಅಲ್ಲಿ ಯಾವುದೋ ಕಾರಣಕ್ಕಾಗಿ ತನ್ನ ಮನೆಯವರೊಂದಿಗೆ ಜಗಳವಾಗಿದೆ. ಈ ವೇಳೆ ಮನೆಯವರು ಪೊಲೀಸ್ ದೂರು ನೀಡುವುದಾಗಿ ತಿಳಿಸಿ ತೆರಳಿದ್ದು ಇದೇ ವೇಳೆ ಮನೆಗೆ ಬಂದ ನಿತಿನ್ ಬಾಗಿಲು ಹಾಕಿ ನೇಣು ಬಿಗಿದುಕೊಂಡಿದ್ದಾರೆ. ಮನೆಯವರು ಸಂಜೆ ಬಂದು ನೋಡಿದಾಗ ನೇಣು ಹಾಕಿಕೊಂಡಿದ್ದು ಗೊತ್ತಾಗಿದೆ. ತಕ್ಷಣ ಸ್ಥಳೀಯರ ಸಹಕಾರದಲ್ಲಿ ಮನೆಯವರು ಆಸ್ಪತ್ರೆಗೆ ಸಾಗಿಸಿದರೂ ಅಷ್ಟೊತ್ತಿಗಾಗಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಜಗಳ ನಡೆಯಲು ನಿಖರ ಕಾರಣ ಏನೆಂದು ಪೊಲೀಸ್‌ ತನಿಖೆಯಿಂದ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!