July 13, 2026

ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ವಿಜಯ್

0
1720001647_vijay-1.jpg

ಚೆನ್ನೈ: ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ, ವಕ್ಫ್ ತಿದ್ದುಪಡಿ ಮಸೂದೆ 2024ನ್ನು “ಒಕ್ಕೂಟ ವ್ಯವಸ್ಥೆ ವಿರುದ್ಧದ ದಾಳಿ” ಎಂದು ಕರೆದಿದ್ದು, ಪ್ರಸ್ತಾವಿತ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದ್ದು, ಬಿಜೆಪಿ ಮತ್ತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಇದಲ್ಲದೆ, ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಡಿಎಂಕೆ ಸರಕಾರವನ್ನು ತರಾಟೆಗೆ ತೆಗೆದುಕೊಂಡ ತಮಿಳಗ ವೆಟ್ರಿ ಕಳಗಂ ಪಕ್ಷವೂ ಜಾತಿ ಸಮೀಕ್ಷೆ ನಡೆಸುವಂತೆ, ಪರಂದೂರು ವಿಮಾನ ನಿಲ್ದಾಣ ಯೋಜನೆಯನ್ನು ಕೈಬಿಡುವಂತೆ, ರಾಜ್ಯದಲ್ಲಿನ ಮದ್ಯದಂಗಡಿಗಳನ್ನು ಮುಚ್ಚುವಂತೆ, ನೀಟ್ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು ಈ ನೀತಿಯ ಜಾರಿಯನ್ನು ಪಕ್ಷವು ವಿರೋಧಿಸುತ್ತದೆ ಎಂದು ಹೇಳಿದೆ.

Leave a Reply

Your email address will not be published. Required fields are marked *

You may have missed

error: Content is protected !!