March 22, 2026

ವಿಮಾನ ಅಪಘಾತ: ಒಂಬತ್ತು ಮಂದಿ ಮೃತ್ಯು

0
image_editor_output_image-321012379-1639631116980.jpg

ಸ್ಯಾಂಟೋ ಡೊಮಿಂಗೊ: ಡೊಮಿನಿಕನ್ ರಿಪಬ್ಲಿಕ್ ರಾಜಧಾನಿ ಸ್ಯಾಂಟೋ ಡೊಮಿಂಗೊದಲ್ಲಿರುವ ಲಾಸ್ ಅಮೆರಿಕಾಸ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಖಾಸಗಿ ವಿಮಾನ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಹೆಲಿಡೋಸ ಏವಿಯೇಷನ್ ಗ್ರೂಪ್ ವಿಮಾನಯಾನ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಲಾಸ್ ಅಮೆರಿಕಾಸ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿರುವ ವಿಮಾನ ದುರಂತ ವಿಷಾದಕರ. ಈ ಅಪಘಾತದಲ್ಲಿ ಎಲ್ಲ ಸಿಬ್ಬಂದಿ ಮತ್ತು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಎಂದು ಹೇಳಿದೆ.

ಸಿಎನ್‌ಎನ್ ವರದಿ ಪ್ರಕಾರ, ಲಾಸ್ ಅಮೆರಿಕಾಸ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ವೇಳೆಯಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಏಳು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ.

ಫ್ಲೋರಿಡಾಗೆ ಹೊರಟ ವಿಮಾನವು ಟೇಕ್ ಆಫ್ ಆದ 15 ನಿಮಿಷದಲ್ಲೇ ತುರ್ತು ಲ್ಯಾಂಡಿಂಗ್ ವೇಳೆಯಲ್ಲಿ ಪತನಗೊಂಡಿದೆ ಎಂದು ಹೇಳಿದೆ.

Leave a Reply

Your email address will not be published. Required fields are marked *

error: Content is protected !!