ಹೊಂಡದಲ್ಲಿ ಈಜಲು ತೆರಳಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವು
ಚಿಕ್ಕಬಳ್ಳಾಪುರ: ನೀರಿನ ಹೊಂಡದಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರಂಜಿತ್ (27) ಅಭಿಲಾಷ್ (21) ಹಾಗೂ ರಮ್ಯ (24) ಎಂದು ಗುರುತಿಸಲಾಗಿದೆ. ಮೂವರು ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ದೀಪಾವಳಿ ಹಬ್ಬಕ್ಕೆ ಸ್ವಗ್ರಾಮಕ್ಕೆ ಬಂದಿದ್ದರು. ಈ ವೇಳೆ ನೀರಿನ ಹೊಂಡದಲ್ಲಿ ಈಜಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ.
ಸ್ಥಳೀಯರು, ಆಗ್ನಿಶಾಮಕ ದಳ ಸಿಬ್ಬಂದಿ ನೆರವಿನೊಂದಿಗೆ ಮೃತದೇಹಗಳನ್ನು ಹೊರ ತೆಗೆದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪೇರೇಸಂದ್ರ ಪೊಲೀಸರು (Police) ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.




