February 4, 2026

ಉಡುಪಿ: ಮಗುವಿನ ಮೇಲೆ ಹಲ್ಲೆ ಪ್ರಕರಣ: ತಾಯಿ, ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ

0
image_editor_output_image688631615-1730695417568.jpg

ಉಡುಪಿ: ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಾಯಿ ಮತ್ತು ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿ ತಾಯಿ ಪೂರ್ಣಪ್ರಿಯಾ ಮತ್ತು ಆಕೆಯ ಪ್ರಿಯಕರ ಸುಹೇಲ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೆ.13ರಂದು ಅನಾರೋಗ್ಯದ ಕಾರಣ ನೀಡಿ ಮಗುವನ್ನು ಉಡುಪಿ ಸರ್ಕಾರಿ ಆಸ್ಪತ್ರೆಗೆ ತಾಯಿ ದಾಖಲಿಸಿದ್ದಳು.

ಗಾಯಗಳ ಬಗ್ಗೆ ತಾಯಿ ಪೂರ್ಣಪ್ರಿಯಾ ಯಾವುದೇ ಮಾಹಿತಿ ನೀಡಿರಲಿಲ್ಲ. ಜಿಲ್ಲಾ ಆರೋಗ್ಯಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಕಳುಹಿಸಿದ್ದರು.

ಅಧಿಕಾರಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡ ಮಗುವಿನ ವಿಚಾರಣೆ ನಡೆಸಿದರು. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವಿಚಾರಣೆಗೊಳಿಸಲಾಯಿತು.

Leave a Reply

Your email address will not be published. Required fields are marked *

error: Content is protected !!