ಸಾವಿನಲ್ಲೂ ವಿಕೃತಿ ಕಾಣಬಹುದು ಎಂಬುದನ್ನು ನಿನ್ನಿಂದ ಕಲಿಯಬಹುದು: ನಟ ಜಗ್ಗೇಶ್ ವಿರುದ್ಧ ವಾಗ್ದಾಳಿ ನಡೆಸಿದ ಜಗದೀಶ್
ಬೆಂಗಳೂರು: ಕನ್ನಡ ಸಿನಿಮಾ ನಿರ್ದೇಶಕ ಮಠ ಖ್ಯಾತಿಯ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ದೊರೆತಿದ್ದು, ಇದೇ ವೇಳೆ ನಟ ನವರಸನಾಯಕ ಜಗ್ಗೇಶ್ ಅವರು ಗುರುಪ್ರಸಾದ್ ವ್ಯಕ್ತಿತ್ವ ಸೇರಿದಂತೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಅವರ ಹೇಳಿಕೆಗಳ ವಿರುದ್ಧ ಬಗ್ಗೆ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅವರು ತೀವ್ರ ಬೇಸರ ಹೊರಹಾಕಿದ್ದಾರೆ.
ನಟ ಜಗ್ಗೇಶ್ ಹಾಗು ನಿರ್ದೇಶಕ ಗುರುಪ್ರಸಾದ್ಅವರು ಜೊತೆಯಾಗಿ ‘ಮಠ’, ‘ಎದ್ದೇಳು ಮಂಜುನಾಥ’, ‘ರಂಗನಾಯಕ’ ಸಿನಿಮಾಗಳನ್ನು ಮಾಡಿದ್ದರು. ಆದರೆ ಅವರಿಬ್ಬರ ನಡುವೆ ಮನಸ್ತಾಪ ಇತ್ತು. ಭಾನುವಾರ ಗುರುಪ್ರಸಾದ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಆಯಿತು. ಕೂಡಲೇ ಜಗ್ಗೇಶ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಆದರೆ ಅವರು ಗುರುಪ್ರಸಾದ್ ನಿಧನದ ಬಳಿಕ ಕೆಳಮಟ್ಟದಲ್ಲಿ ಟೀಕೆ ಮಾಡಿದ್ದು ಸರಿಯಲ್ಲ ಎಂದು ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅವರು ಹೇಳಿದ್ದಾರೆ. ಈ ಮನಸ್ಥಿತಿಯನ್ನು ವಿಕೃತಿ ಎಂದು ಜಗದೀಶ್ ಹೇಳಿದ್ದಾರೆ
ವಾವ್ ಜಗ್ಗೇಶ್.. ಸತ್ತ ವ್ಯಕ್ತಿ ಬಗ್ಗೆ ಎಂತಹಾ ವಿಶ್ಲೇಷಕ ಕೃತಿಯನ್ನು ಕೊಟ್ಟೆ. ಸಾವಿನಲ್ಲೂ ವಿಕೃತಿ ಕಾಣಬಹುದಾಗಿದೆ ಎಂಬುದನ್ನು ನಿನ್ನಿಂದ ಕಲಿಯಬೇಕಾಗಿದೆ. ಸಂಸ್ಕೃತಿಯೇ ಅದೇ ರೀತಿ ಇದೆಯೋ ಅಥವಾ ನಿನ್ನ ಮನಸ್ಥಿತಿಯೇ ಅಷ್ಟು ವಿಕೃತವಾಗಿದೆಯೋ ನನಗೆ ಗೊತ್ತಿಲ್ಲ. ಗುರು ಪ್ರಸಾದ್ ಗೆ ಕೆರೆತ ಇತ್ತಾ? ಕೀವು, ರಕ್ತ ಬರುತ್ತಿತ್ತಾ? ಎಂಥ ಮನುಷ್ಯ ನೀನು? ಯಾವ ರೀತಿಯಲ್ಲಿ ಮನುಷ್ಯ ಎನ್ನಬೇಕೋ ತಿಳಿಯುತ್ತಿಲ್ಲ’ ಎಂದು ಜಗದೀಶ್ ಹೇಳಿದ್ದಾರೆ.
ನಿನ್ನನ್ನು ನೀನು ರಾಘವೇಂದ್ರರ ಭಕ್ತ ಅಂತ ಹೇಳ್ತೀಯ. ರಾಘವೇಂದ್ರನ ಭಕ್ತನಾಗಿ, ನಿನಗೆ ಲೈಫ್ ಕೊಟ್ಟ ಡೈರೆಕ್ಟರ್ ಬಗ್ಗೆ ಈ ರೀತಿ ಮಾತಾಡ್ತೀಯ. ‘ಮಠ’ ಸಿನಿಮಾದಲ್ಲಿ ಗುರುಪ್ರಸಾದ್ ನಿನಗೆ ಲೈಫ್ ಕೊಟ್ಟ. ಜಗ್ಗೇಶ್ ಯಾರು ಅಂತ ಇಡೀ ಕರ್ನಾಟಕ ಮರೆತುಹೋಗಿತ್ತು. ಸಾವಿನಲ್ಲೂ ವಿಕೃತಿ ಕಾಣುವಂತಹ ವ್ಯಕ್ತಿ ನೀನು ಎಂಬುದು ನನಗೆ ಗೊತ್ತಿರಲಿಲ್ಲ’ ಎಂದು ಜಗ್ಗೇಶ್ ಗೆ ಜಗದೀಶ್ ಚಾಟಿ ಬೀಸಿದ್ದಾರೆ.




