February 4, 2026

ಸಾರಿಗೆ ಬಸ್ಸಿನಲ್ಲಿ ಹೃದಯಾಘಾತ: ಪ್ರಯಾಣಿಕ ಮೃತ್ಯು

0
image_editor_output_image-1375888486-1730703558864.jpg

ದಾಂಡೇಲಿ: ಧಾರವಾಡದಿಂದ ದಾಂಡೇಲಿ ಗೆ ಬರುತ್ತಿದ್ದೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಕರೋರ್ವರಿಗೆ ಹೃದಯಾಘಾತವಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ಕಲ್ಲೋಳಿಯವರ ಓಣಿ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಪುಂಡಲಿಕ್ ಚಂದರಗಿ ಎಂಬವರೇ ಹೃದಯಘಾತಕ್ಕೊಳಗಾದ ಪ್ರಯಾಣಿಕರಾಗಿದ್ದಾರೆ.

ಚಂದರಗಿ ಅವರು ಧಾರವಾಡದಿಂದ ಸಾರಿಗೆ ಬಸ್ಸಿನಲ್ಲಿ ದಾಂಡೇಲಿಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿದೆ. ದಾಂಡೇಲಿಗೆ ಬಸ್ ಬರುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ಇನ್ನಿತರ ಪ್ರಯಾಣಿಕರು ನಿರ್ವಾಹಕರಿಗೆ ಮಾಹಿತಿಯನ್ನು ನೀಡಿದ್ದಾರೆ.

ಕುಳಿತಲ್ಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಇವರು ಏನು ಮಾಡಿದರೂ ಎಚ್ಚರಗೊಳ್ಳದಿದ್ದಾಗ ಬಸ್ಸಿನ ನಿರ್ವಾಹಕ ತಕ್ಷಣವೇ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ‌ ನೀಡಿದ್ದಾರೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಾರ್ವಜನಿಕ ಆಸ್ಪತ್ರೆಗೆ ಮಾಹಿತಿಯನ್ನು ನೀಡಿ ಆಂಬುಲೆನ್ಸ್ ತರಿಸಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

Leave a Reply

Your email address will not be published. Required fields are marked *

error: Content is protected !!