December 15, 2025

ಮಂಗಳೂರು: ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

0
image_editor_output_image-1596083970-1730722561522.jpg

ಮಂಗಳೂರು: ದೇವಾಲಯದ ಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿದ ಕಳ್ಳರ ದಂಡು, ನೂರಾರು ವರ್ಷಗಳ ಇತಿಹಾಸವಿದ್ದ ದೇವರಿಗೆ ಸಂಬಂಧಿಸಿದ ಲಕ್ಷಾಂತರ ರೂ ಮೌಲ್ಯ ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಹೋದ ಘಟನೆ ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ದೇವಳಕ್ಕೆ ಸಂಬಂಧಿಸಿದಂತೆ ಅನಾದಿ ಕಾಲದ ನೂರಾರು ವರ್ಷಗಳ ಹಳೆಯದಾದ ಹಿರಿಯರು ಮಾಡಿಸಿದಂತ ಸುಮಾರು ಒಂದುವರೆ ಕೆ.ಜಿ‌ ತೂಕದ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ದೇವರ ಮೂಗುತಿ ದೇವರ ಕೊಡೆ ಸೇರಿದಂತೆ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವಾಗಿದೆ. ಇದರ ಜೊತೆಗೆ ಕಾಣಿಕೆ ಹುಂಡಿಯಲ್ಲಿರುವ ನಗದನ್ನು ಕೊಂಡುಹೋಗಿದ್ದಾರೆ.

ಆದಿತ್ಯವಾರ ಮಂದಿರದಲ್ಲಿ ವಿಶೇಷವಾದ ಪೂಜಾ ಕಾರ್ಯಕ್ರಮವಿದ್ದ ಕಾರಣ ಕಾಣಿಕೆ ಹುಂಡಿಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಹಣವಿರಬಹುದು ಎಂದು ಹೇಳಲಾಗುತ್ತಿದೆ.

ಸುಮಾರು 5 ಜನರ ತಂಡ ಈ ಕಳ್ಳತನದಲ್ಲಿ ಭಾಗಿಯಾಗಿರುವುದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

error: Content is protected !!