March 22, 2026

ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ ಸ್ಟೇಬಲ್‌ನ ಬರ್ಬರ ಹತ್ಯೆ

0
image_editor_output_image-1014995586-1730784804629.jpg

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್‌ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಕೊಲೆಯಾದ ವ್ಯಕ್ತಿಯಾಗಿದ್ದಾರೆ, ಹರೀಶ್ ಅವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು.

ಇದೇ ನವೆಂಬರ್ 11 ಕ್ಕೆ ಹರೀಶ್ ಅವರ ವಿವಾಹ ಕೂಡ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು ಸಂಬಂಧಿಕರಿಗೆ ಹಂಚಿ ರಾತ್ರಿ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಡಾಬಾ ಸರ್ಕಲ್‌ನಲ್ಲಿ ಈ ಕೃತ್ಯ ಎಸಗಲಾಗಿದೆ.

ದುಷ್ಕರ್ಮಿಗಳು ಅವರ ಬೈಕಿನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!