March 22, 2026

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಯನ್ನ ಮರಕ್ಕೆ ಕಟ್ಟಿ ಥಳಿಸಿ ಕೊಂದ ಗ್ರಾಮಸ್ಥರು

0
image_editor_output_image1742613246-1730785071426.jpg

ಕೋಲ್ಕತ್ತಾ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ವ್ಯಕ್ತಿಯನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಥಳಿಸಿ ಹತ್ಯೆಗೈದ ಘಟನೆ ಪಶ್ಚಿಮ ಬಂಗಾಳದ ಫಲಕಟಾ ಗ್ರಾಮದಲ್ಲಿ ನಡೆದಿದೆ.

ಮೋನಾ ರಾಯ್ (40) ಎಂಬಾತನನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ.

6 ವರ್ಷದ ಅಪ್ರಾಪ್ತೆ ಕಾಣೆಯಾದ ಬಗ್ಗೆ ಆಕೆಯ ಪೋಷಕರು ಸಮೀಪದ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪೊಲೀಸರ ಹುಡುಕಾಟದ ವೇಳೆ ಆಕೆಯ ಬಟ್ಟೆ ಪತ್ತೆಯಾಗಿತ್ತು. ಬಳಿಕ ಬಾಲಕಿಯ ಶವ ಕೊಳ ಒಂದರಲ್ಲಿ ಪತ್ತೆಯಾಗಿತ್ತು. ಬಳಿಕ ಆಕೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!