March 22, 2026

ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಅಕ್ರಮ ಮರಳುಗಾರಿಕೆಗೆ: ಪೊಲೀಸರಿಗೆ ಮಾಹಿತಿ ನೀಡಿದ ವ್ಯಕ್ತಿಯ ಕೊಲೆಗೆ ಯತ್ನ

0
image_editor_output_image-2004232262-1730785820075.jpg

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಿಂಗಳುಗಳ ಹಿಂದೆ ಅಕ್ರಮ ಮರಳುಗಾರಿಕೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಪ್ರಕರಣಕ್ಕೆಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೋರ್ವರಿಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆಗೈಯ್ದು ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ಸೋಮೇಶ್ವರ ಪುರಸಭಾ ಕಚೇರಿಯ ಬಳಿ ಸೋಮವಾರ ನಡೆದಿದೆ.

ಸೋಮೇಶ್ವರ ಉಚ್ಚಿಲದ, ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯ ಕಿಶೋರ್ ಎಮ್ ಉಚ್ಚಿಲ (53) ಹಲ್ಲೆಗೊಳಗಾದ ವ್ಯಕ್ತಿ.

ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸುನಿಲ್ ಪೂಜಾರಿ ಹಲ್ಲೆಗೈದಿದ್ದು, ಕಿಶೋರ್ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!