February 4, 2026

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ನಿಖಿಲ್ ವಿರುದ್ಧ FIR ದಾಖಲು

0
image_editor_output_image-1195097722-1730788458087.jpg

ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಅಲ್ಲದೆ, ಚನ್ನಪಟ್ಟಣದ ಬಿಜೆಪಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಆರೋಪಿ ನಂಬರ್ 2 ಆಗಿದ್ದಾರೆ. ಎಡಿಜಿಪಿ ಚಂದ್ರಶೇಖರ್‌ ಅವರು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದ ಕುಮಾರಸ್ವಾಮಿ, ಚಂದ್ರಶೇಖರ್ ಅವರ ವಿರುದ್ಧ ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿದ್ದರು. ಅಲ್ಲದೆ, ಚಂದ್ರಶೇಖರ್‌ ಅವರ ಆಸ್ತಿಯ ವಿವರಗಳನ್ನು ಕೂಡಾ ಬಹಿರಂಗಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಚಂದ್ರಶೇಖರ್ ದೂರು ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!