ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ಆತ್ಮಹತ್ಯೆ
ಬೆಳಗಾವಿ: ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ, ತಹಶೀಲ್ದಾರ್ ಕಚೇರಿ ದ್ವೀತಿಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು, ನಿನ್ನೆ ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ಎಲ್ಲಮ್ಮ ಆಡಳಿತ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.




