February 4, 2026

ಕಡಬ: ಪೂಜೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

0
image_editor_output_image1906799050-1730796910939.jpg

ಕಡಬ: ಪೂಜೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ದೇಹ ಸ್ಪರ್ಶಿಸಿ ಅಶ್ಲೀಲ ವರ್ತನೆ ತೋರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ.

ಸ್ಥಳೀಯ ಕಾಲೇಜು ವಿದ್ಯಾರ್ಥಿಯೊಬ್ಬಳು ದೀಪಾವಳಿ ಹಬ್ಬ ಪ್ರಯುಕ್ತ ತನ್ನ ಮನೆಗೆ ಬಂದಿದ್ದರು. ನ.2 ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿದ್ದ ಪೂಜೆಯಲ್ಲಿ ಭಾಗವಹಿಸಿ ಮನೆಯವರ ಜೊತೆ ಭೋಜನಾ ಶಾಲೆಯತ್ತ ತೆರಳಿದ್ದರು.

ಈ ಸಂದರ್ಭದಲ್ಲಿ ಊಟಕ್ಕೆ ಕುಳಿತುಕೊಳ್ಳಲು ಗೋಡೆ ಬದಿ ನಿಂತು ಕಾಯುತ್ತಿರುವಾಗ ಅಲ್ಲೇ ಪಕ್ಕದಲ್ಲಿ ಓಡಾಟ ಮಾಡುತ್ತಿದ್ದ ಆರೋಪಿ ಶಿವರಾಮ ಭಟ್ ಎಂಬಾತ ಯುವತಿಯ ಎದೆ ಭಾಗಕ್ಕೆ ಕೈ ಹಾಕಿ ದೈಹಿಕ ಹಿಂಸೆ ನೀಡಿರುವುದಾಗಿ ಆರೋಪಿಸಲಾಗಿದೆ .ಅಲ್ಲದೆ ಪ್ರಶ್ನಿಸಿದಕ್ಕೆ ಆರೋಪಿ ಅವಾಚ್ಯ ಶಬ್ದ ಗಳಿಂದ ಬೈದಿರುವುದಾಗಿ ದೂರಲಾಗಿದೆ.

ಈತ ಸುಬ್ರಹ್ಮಣ್ಯದಲ್ಲೇ ಜೆರಾಕ್ಸ್ ಅಂಗಡಿಯೊಂದನ್ನು ಇಟ್ಟುಕೊಂಡಿದ್ದು ದೇಗುಲ ಪರಿಸರದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ. ಯುವತಿಯ ದೂರನ್ನು ಪರಿಶೀಲಿಸಿ ಸುಬ್ರಹ್ಮಣ್ಯ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯಡಿ (BNS ACT -75,352 ಕಾಲಂ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!