ಉಪ್ಪಿನಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜ್ ವಿದ್ಯಾರ್ಥಿನಿ ಮೃತ್ಯು
ಕೊಕ್ಕಡ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದು, ಮೃತಪಟ್ಟ ಹಿನ್ನೆಲೆಯಲ್ಲಿ ನ.5ರಂದು ಕಾಲೇಜಿಗೆ ರಜೆ ಘೋಷಿಸಲಾಗಿದೆ.