ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್ ಫೋನ್ ಇಟ್ಟು ಮಹಿಳೆಯರ ಖಾಸಗಿ ದೃಶ್ಯ ರೆಕಾರ್ಡ್: ಜಯದೇವ ಆಸ್ಪತ್ರೆಯ ವಾರ್ಡ್ ಹೆಲ್ಪರ್ ನ ಬಂಧನ
ಬೆಂಗಳೂರು: ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್ ಫೋನ್ ಇಟ್ಟು ಮಹಿಳೆಯರ ಖಾಸಗಿ ಅಂಗಾಂಗ ದೃಶ್ಯಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದ ಆರೋಪಿಯನ್ನು ತಿಲಕ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಯದೇವ ಆಸ್ಪತ್ರೆಯ ವಾರ್ಡ್ ಹೆಲ್ಪರ್ ಯಲ್ಲಾಲಿಂಗ ಬಂಧಿತ ಆರೋಪಿ.
ಜಯದೇವ ಆಸ್ಪತ್ರೆಯಲ್ಲಿ ಐದು ವರ್ಷದಿಂದ ವಾರ್ಡ್ ಹೆಲ್ಪರ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಯಲ್ಲಾಲಿಂಗ ಅವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ದೂರು ದಾಖಲಾದ ಬಳಿಕ ಸಂಸ್ಥೆಯ ಪೋಷ್ ಸಮಿತಿ ಎದುರು ಅವರನ್ನು ವಿಚಾರಣೆಗೆ ಒಳಪಡಿಸಿ, ಅಮಾನತು ಮಾಡಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





