February 4, 2026

ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ಆತ್ಮಹತ್ಯೆ ಮಾಡಿಕೊಂಡ ಪಾಪಿ‌ ತಂದೆ

0
image_editor_output_image1469199391-1730871129483.jpg

ಗದಗ: ತಂದೆಯೋರ್ವ ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ.

ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವೇದಾಂತ 3, ಪವನ 4, ಧನ್ಯಾ 6 ನದಿ ಪಾಲಾದ ಮಕ್ಕಳು. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡರಗಿ ಪೊಲೀಸರ ದೌಡಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!