ಚಿಕ್ಕಬಳ್ಳಾಪುರ: ಲಾರಿ ಚಾಲಕನ ಅವಾಂತರದಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತವಾಗಿದೆ. ಇದರ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಕಾರು ಬೈಕ್ ನಜ್ಜುಗುಜ್ಜಾಗಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಲೊಕೇಶ್ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.