February 4, 2026

ಕಾರಿಗೆ ಲಾರಿ ಡಿಕ್ಕಿ: ದಂಪತಿ ಸಾವು

0
image_editor_output_image352158782-1730879424280.jpg

ನರಗುಂದ: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗ ಗಂಭೀರ ಗಾಯಗಳಾದ ಘಟನೆ ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ನಡೆದಿದೆ.

ಮೃತರನ್ನು ಬಾಗಲಕೋಟೆಯ ಸಿದ್ದರಾಮ ಹಾಗೂ ಹೇಮಾ ಎಂದು ಗುರುತಿಸಲಾಗಿದೆ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿದ್ದು, ಅವರನ್ನು ನರಗುಂದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬುಧವಾರ ಬೆಳಿಗ್ಗೆ ಅಪಘಾತ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

error: Content is protected !!