ಬಂಟ್ವಾಳ: ಗಂಭೀರ ಗಾಯಗೊಂಡಿದ್ದ ಕಡೆಗೋಳಿ ನಿವಾಸಿ ಸಂದೀಪ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನ. 3 ರಂದು ಖಾಸಗಿ ಬಸ್ ಹಾಗೂ ಸ್ಕೂಟರ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮತ್ತೋರ್ವ ಸವಾರ ಅದೇ ದಿನ ಸ್ಥಳದಲ್ಲೇ ಮೃತಪಟ್ಟಿದ್ದರು.
ಕಡೆಗೋಳಿ ನಿವಾಸಿ ಸಂದೀಪ್ (30) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನ. 5 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮತ್ತೋರ್ವ ಸವಾರ ಪ್ರವೀಣ್ (30) ಸ್ಥಳದಲ್ಲೇ ಮೃತಪಟ್ಟಿದ್ದರು.
ಬಸ್ ನ ಮಿತಿ ಮೀರಿದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಘಟನೆಗೆ ಕಾರಣವಾದ ಖಾಸಗಿ ಬಸ್ಸಿನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಕಲ್ಲು ತೂರಾಟ ನಡೆಸಿದ ಘಟನೆಯೂ ವರದಿಯಾಗಿತ್ತು.