ಬಂಟ್ವಾಳ: ದೇವಸ್ಥಾನದ ಚಿನ್ನದ ಮೂರ್ತಿ ಕಳವು: ಪುತ್ತೂರು ಮೂಲದ ಆರೋಪಿಯ ಬಂಧನ
ಬಂಟ್ವಾಳ: 20 ವರ್ಷಗಳ ಹಿಂದೆ ದೇವಸ್ಥಾನದ ಚಿನ್ನದ ಮೂರ್ತಿ ಕಳವುಗೈದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಿದ ಘಟನೆ ನಡೆದಿದೆ.
ಪುತ್ತೂರು ತಾಲ್ಲೂಕು ಉಡ್ಡಂಗಳ ಮನೆ ಮೊಹಮ್ಮದ್ ಶರೀಫ್ (44) ಬಂಧಿತ ಆರೋಪಿ.
ಬಂಟ್ವಾಳ ಗ್ರಾಮಾಂತರ ಠಾಣೆಗೆ ಸಂಬಂದಿಸಿ ದಿನಾಂಕ 07.11.2004 ರಂದು ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಕಳ್ಳತನ ಪ್ರಕರಣದಲ್ಲಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಹಲವಾರು ವಿಳಾಸ, ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೇ ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪುತ್ತಿಗೆ ಎಂಬಲ್ಲಿ ವಾಸವಾಗಿದ್ದ ಆರೋಪಿಯನ್ನು ಪತ್ತೆಮಾಡಲು ಬೇರೆ ಬೇರೆ ಆಯಾಮಗಳಿಂದ ಮಾಹಿತಿ ಕಲೆಹಾಕಿ ಇಂದು ಕಾಸರಗೋಡುನಿಂದ ವಶಕ್ಕೆ ಪಡೆಯಲಾಗಿದೆ.





