ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಯಾವುದೇ ಆತುರದ ಕ್ರಮ ಬೇಡ: ಪೊಲೀಸರಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಲೋಕಾಯುಕ್ತ ಎಸ್‌ಐಟಿ ಮುಖ್ಯಸ್ಥ ಎಂ. ಚಂದ್ರಶೇಖರ್ ನೀಡಿರುವ ದೂರಿನ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಯಾವುದೇ ಆತುರದ ಕ್ರಮಕ್ಕೆ ಮುಂದಾಗಬಾರದು ಎಂದು ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜತೆಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಎಂ. ಚಂದ್ರಶೇಖರ್ ದೂರು ಆಧರಿಸಿ ಸಂಜಯನಗರ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಎಚ್.ಡಿ. ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಶಾಸಕ ಸುರೇಶ್ ಬಾಬು ಅರ್ಜಿ ಸಲ್ಲಿಸಿದ್ದಾರೆ.