December 18, 2025

ಗುರುಪುರ-ಅಡ್ಡೂರು: ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ: 9 ದೋಣಿಗಳ ವಶಕ್ಕೆ

0
image_editor_output_image-1614926467-1731044819234.jpg

ಮಂಗಳೂರು: ಗುರುಪುರ ಅಡ್ಡೂರು ಸಮೀಪದ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಕಾರಿಗಳು ದಾಳಿ ನಡೆಸಿದ್ದು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ಥಳದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.
ಮಂಗಳೂರು ಉಪವಿಭಾಗಾ ಧಿಕಾರಿ ಹರ್ಷವರ್ಧನ್‌ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್‌ ಪ್ರಶಾಂತ್‌ ಪಾಟೀಲ್‌, ಗಣಿ ಇಲಾಖೆಯ ಭೂವಿಜ್ಞಾನಿ ಗಿರೀಶ್‌ ಮೋಹನ್‌ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!