ಮುಲ್ಕಿ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮುಲ್ಕಿ: ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಾವಣಗೆರೆ ಜಿಲ್ಲೆಯ ಸವಲಂಗ ಎಂಬಲ್ಲಿ ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅತ್ತೂರು ನಿವಾಸಿ ಸುರೇಶ ಪೂಜಾರಿ(52) ಬಂಧಿತ ಆರೋಪಿ.
ಆರೋಪಿ ಸುರೇಶ್ ಪೂಜಾರಿ ವಿವಿಧ ಕಳ್ಳತನ ಪ್ರಕರಣದಲ್ಲಿ ಶಾಮಿಲಾಗಿದ್ದು ಈತನ ಮೇಲೆ ಧರ್ಮಸ್ಥಳ ಠಾಣೆ, ಬೆಳ್ತಂಗಡಿ ಠಾಣೆ, ಉಡುಪಿ ನಗರ ಠಾಣೆ, ಹೆಬ್ರಿ ಠಾಣೆ, ಶಿರ್ವ ಠಾಣೆ, ಹಿರಿಯಡ್ಕ ಠಾಣೆ, ಪಡುಬಿದ್ರೆ ಠಾಣೆ, ಕಾರ್ಕಳ ನಗರ ಠಾಣೆ, ದಾವಣಗೆರೆ ಗ್ರಾಮಾಂತರ ಠಾಣೆ ಹಾಗೂ ಮಹಾರಾಷ್ಟ್ರ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ವಿದ್ಯಾಧರ್ ಡಿ ಬೈಕೇರಿಕರ್ ಹಾಗೂ ಪೊಲೀಸ್ ಉಪ ನಿರೀಕ್ಷರಾದ ಅನಿತಾ ರವರ ಮಾರ್ಗದರ್ಶನದಲ್ಲಿ, ಠಾಣಾ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ರವರಾದ ಉದಯ, ಜಯರಾಮ್ ಜೆ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.