August 14, 2026

ಬಾಬಾ ಸಿದ್ದಿಕಿ ಮೇಲೆ ಗುಂಡು ಹಾರಿಸಿದ ಆರೋಪಿ ಬಂಧನ: ನೇಪಾಳಕ್ಕೆ ಪರಾರಿಯಾಗಲು ಯತ್ನಿಸುವ ವೇಳೆ ಆರೋಪಿ ಸೆರೆ

0
image_editor_output_image968767808-1731253562486.jpg

ಮುಂಬೈ: ಅಕ್ಟೋಬರ್ 12 ರಂದು ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕ್ ಮೇಲೆ, ಅವರ ಮಗನ ಕಚೇರಿಯ ಹೊರಗೆ ಗುಂಡು ಹಾರಿಸಿದ ಆರೋಪಿಯನ್ನು ರವಿವಾರ ಬಂಧಿಸಲಾಗಿದೆ.

ಉತ್ತರಪ್ರದೇಶ ಎಸ್‌ಟಿಎಫ್ ಮತ್ತು ಮುಂಬೈ ಅಪರಾಧ ವಿಭಾಗ ಜಂಟಿ ಕಾರ್ಯಾಚರಣೆಯಲ್ಲಿ ಬಹ್ರೈಚ್‌ನಲ್ಲಿ ಅರೋಪಿ ಶಿವಕುಮಾರ್‌ನನ್ನು ಬಂಧಿಸಲಾಗಿದೆ. ಆರೋಪಿಯು ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶ ಎಸ್‌ಟಿಎಫ್‌ನೊಂದಿಗಿನ ಜಂಟಿ ಕಾರ್ಯಾಚರಣೆಯಲ್ಲಿ, ಮುಂಬೈ ಅಪರಾಧ ವಿಭಾಗದ ತಂಡವು ಶಿವಕುಮಾರ್‌ಗೆ ಆಶ್ರಯ ನೀಡಿ ನೇಪಾಳಕ್ಕೆ ಪರಾರಿಯಾಗಲು ಸಹಾಯ ಮಾಡಿದ್ದಕ್ಕಾಗಿ ಅನುರಾಗ್ ಕಶ್ಯಪ್, ಜ್ಞಾನ್ ಪ್ರಕಾಶ್ ತ್ರಿಪಾಠಿ, ಆಕಾಶ್ ಶ್ರೀವಾಸ್ತವ ಮತ್ತು ಅಖಿಲೇಶೇಂದ್ರ ಪ್ರತಾಪ್ ಸಿಂಗ್ ಅವರನ್ನೂ ಬಂಧಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!