March 28, 2026

ಮಂಗಳೂರು: ಇಂಡಿಯನ್ ಬುಕ್ ಆಫ್ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದ ಪೂರ್ವಿ ನಿಧನ

0
image_editor_output_image-2127257146-1731303828585.jpg

ಮಂಗಳೂರು: ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದ 7 ವರ್ಷದ ಬಾಲಕಿ ಪೂರ್ವಿ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನ ಹೊಂದಿದಳು.

ಗ್ರೀನ್ ವುಡ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಕಲಿಯುತ್ತಿದ್ದ, ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದ‌ರ್ ವೈಶಾಲಿ ಎಲ್. ಬೆಂಗ್ರೆ ಅವರ ಪುತ್ರಿ ಪೂರ್ವಿ ಅನಾರೋಗ್ಯಕ್ಕೀಡಾದಾಗ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು ಆದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದ್ದಾಳೆ.

2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್‌ ಆಟವಾಡಿ ಇಂಡಿಯನ್‌ ಬುಕ್‌ ಆಫ್‌ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದ ಪೂರ್ವಿ ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದು ಫುಟ್‌ಬಾಲ್, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು. ವಿವಿಧ ಸಂಘ ಸಂಸ್ಥೆಯಿಂದ ಸಮ್ಮಾನ ಪಡೆದುಕೊಂಡಿದ್ದಳು.

Leave a Reply

Your email address will not be published. Required fields are marked *

error: Content is protected !!