March 28, 2026

ಉಡುಪಿ: ನಕಲಿ ಪರುಶುರಾಮನ ಮೂರ್ತಿ ನಿರ್ಮಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ ಬಂಧನ

0
image_editor_output_image-1036988440-1731304320516.jpg

ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು ಕಾರ್ಕಳ ಪೊಲೀಸರು ಕಾರ್ಕಳ ನಗರ ಪೊಲೀಸರು ಪುದುಚೇರಿಯ ಮಾಹೆಯಲ್ಲಿ ಭಾನುವಾರ ಬಂಧಿಸಿದ್ದಾರೆ.

ಕಾರ್ಕಳ ಪರುಶುರಾಮ್ ಥೀಮ್ ಪಾರ್ಕ್ ನಲ್ಲಿ ಕಂಚಿನ ಪರುಶುರಾಮ್ ಮೂರ್ತಿ ನಿರ್ಮಾಣಕ್ಕೆ ಶಿಲ್ಪಿ ಕೃಷ್ಣ ನಾಯಕ್ ಅವರಿಗೆ ನೀಡಲಾಗಿತ್ತು. ಆದರೆ ಅವರು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆ ಸಿದ್ದು, ನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ್ದರು.

ಈ ವಿಚಾರಕ್ಕೆ ಸಂಬಧಿಸಿದಂತೆ ಭಾರಿ ವಿವಾದವಾಗಿದ್ದು, ಸದ್ಯ ಸರಕಾರ ತನಿಖೆ ನಡೆಸುತ್ತಿದೆ. ಈ ನಡುವೆ ಸರಕಾರಕ್ಕೆ ವಂಚಿಸಿದ್ದಾರೆ ಎಂದು ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದರಂತೆ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!