November 21, 2024

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

0

ನವ ದೆಹಲಿ: ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ.

ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಇತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಈ ಮೂರು ಪ್ರಕರಣಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಸುಪ್ರೀಂಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Leave a Reply

Your email address will not be published. Required fields are marked *

error: Content is protected !!