September 20, 2024

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಪತ್ತೆ

0

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಮಹಿಳಾ ಪ್ರಯಾಣಿಕರೊಬ್ಬರಿಂದ 739 ಗ್ರಾಂ ಚಿನ್ನವನ್ನು ಡಿ., ಗುರುವಾರ ವಶ ಪಡಿಸಿಕೊಂಡಿದ್ದಾರೆ.

ದುಬೈ ನಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ಕಾಸರಗೋಡು ಜಿಲ್ಲೆಯ ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ 36 ಲಕ್ಷದ 43 ಸಾವಿರದ 270 ರೂ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಚಿನ್ನದ ಪೇಸ್ಟ್ ಅನ್ನು ಬೂದು ಬಣ್ಣದ ಪೇಪರ್ ನಲ್ಲಿ ಮರೆಮಾಚಿ ಒಳ ಉಡುಪಿನಲ್ಲಿ ಇಟ್ಟು ಹೊಲಿದು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!