March 18, 2026

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿಯ ಸಂಜೀವ ನಾಯ್ಕಗೆ ಜೈಲು ಶಿಕ್ಷೆ, 10,000 ರೂ. ದಂಡ

0
image_editor_output_image718570852-1731353531979.jpg

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 3 ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಸಂಜೀವ ನಾಯ್ಕ (57) ಶಿಕ್ಷೆಗೊಳಗಾದಾತ. ಈತ ಜ. 23ರಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್‌ ನಿರೀಕ್ಷಕ ರವಿ ಬಿ.ಎಸ್‌. ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶರು ಸಾಕ್ಷ್ಯ, ದಾಖಲೆಗಳು, ಪೂರಕ ಸಾಕ್ಷ್ಯ ಹಾಗೂ ವಾದ ಪ್ರತಿವಾದವನ್ನು ಆಲಿಸಿ ಆರೋಪಿತನ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಭಾರತೀಯ ದಂಡ ಸಂಹಿತೆಯ ಕಲಂ 354(ಎ) ಮತ್ತು ಪೋಕೊÕ ಕಾಯ್ದೆ ಕಲಂ 8ರಂತೆ 3 ವರ್ಷಗಳ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 25,000 ರೂ. ಪರಿಹಾರವನ್ನು ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಕೆ. ಬದರಿನಾಥ ನಾಯರಿ ವಾದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!