March 18, 2026

ಅಯೋಧ್ಯೆಯ ರಾಮಮಂದಿರ ಸಹಿತ ಹಿಂದೂ ದೇವಾಲಯಗಳ ದಾಳಿಯ ಎಚ್ಚರಿಕೆ: ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ

0
IMG-20241111-WA0139.jpg

ನವದೆಹಲಿ: ಅಯೋಧ್ಯೆಯ ರಾಮಮಂದಿರ ಸೇರಿದಂತೆ ಹಿಂದೂ ದೇವಾಲಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುವುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ ಹಾಕಿದ್ದಾನೆ.

ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿರುವ ಪನ್ನುನ್, ನವೆಂಬರ್ 16 ಮತ್ತು 17 ರಂದು ದಾಳಿಯ ಬಗ್ಗೆ ಎಚ್ಚರಿಸಿದ್ದಾರೆ. ಇದು ಕೆನಡಾದ ಬ್ರಾಂಪ್ಟನ್‌ನಲ್ಲಿ ರೆಕಾರ್ಡ್ ಮಾಡಲಾದ ವೀಡಿಯೊ ಎನ್ನಲಾಗಿದ್ದು, ಹಿಂದೂ ಪೂಜಾ ಸ್ಥಳಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದು ವರದಿಯಾಗಿದೆ.

ಹಿಂಸಾತ್ಮಕ ಹಿಂದುತ್ವ ಸಿದ್ಧಾಂತದ ಜನ್ಮಸ್ಥಳವಾದ ಅಯೋಧ್ಯೆಯ ಅಡಿಪಾಯವನ್ನು ನಾವು ಅಲುಗಾಡಿಸುತ್ತೇವೆ. ಹಿಂದೂ ದೇವಾಲಯಗಳ ಮೇಲಿನ ಖಲಿಸ್ತಾನಿ ದಾಳಿಯಿಂದ ದೂರವಿರುವಂತೆ ಕೆನಡಾದಲ್ಲಿರುವ ಭಾರತೀಯರಿಗೆ ಪನ್ನುನ್ ಎಚ್ಚರಿಕೆ ನೀಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!