March 19, 2026

ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಬ್ರಹ್ಮಾವರ ಪಿಎಸ್ಸೈ, ಹೆಡ್ ಕಾನ್‌ಸ್ಟೆಬಲ್ ಅಮಾನತು

0
image_editor_output_image-990335961-1731355697303.jpg

ಉಡುಪಿ: ನ.10ರಂದು ಮುಂಜಾನೆ ಬ್ರಹ್ಮಾವರ ಠಾಣೆಯಲ್ಲಿ ಸಂಭವಿಸಿದ ಲಾಕಪ್ ಡೆತ್ ಘಟನೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಧು ಬಿ ಇ ಮತ್ತು ಹೆಡ್ ಕಾನ್‌ಸ್ಟೆಬಲ್ ಸುಜಾತಾ ಅವರನ್ನು ಅಮಾನತುಗೊಳಿಸಲಾಗಿದೆ.

ಮೃತನನ್ನು ಬಿಜು ಮೋಹನ್ ಎಂದು ಗುರುತಿಸಲಾಗಿದ್ದು, ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚೇರ್ಕಾಡಿ ಗ್ರಾಮದಲ್ಲಿ ನಡೆದ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 9 ರಂದು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅವರು ಸಾವನ್ನಪ್ಪಿದರು.ಘಟನೆ ಸಂಬಂಧ ಬಿಜುಮೋಹನ್ ಅವರ ಕುಟುಂಬಸ್ಥರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಉಡುಪಿಯ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರು ಪಾರ್ಥೀವ ಶರೀರದ ವಿಚಾರಣೆ ನಡೆಸಿದರು. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.ಘಟನೆ ಕುರಿತು ಸಿಐಡಿ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!