ಪುತ್ತೂರು: ವಿಷ ಸೇವಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು
ಪುತ್ತೂರು: ವ್ಯಾಪಾರ ವ್ಯವಹಾರದಲ್ಲಿ ವಂಚನೆಗೊಳಗಾಗಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಗಾಂಧಿನಗರ ಅಡಿಕೆ ಅಂಗಡಿಯಲ್ಲಿ ಅಕೌಂಟ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಅಭಿಲಾಷ್ ಮೃತಪಟ್ಟ ಯುವಕ.
ಸುಳ್ಯದ ಗಾಂಧಿನಗರ ಅಡಿಕೆ ಅಂಗಡಿಯಲ್ಲಿ ಮ್ಯಾನೇಜರ್ ಕಮ್ ಅಕೌಂಟ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಭಿಲಾಷ್ ರವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನ.5 ರಂದು ದಾಖಲಿಸಲಾಗಿತ್ತು.




