December 19, 2025

ಉಜಿರೆ: ಕಬಡ್ಡಿ ಕ್ರೀಡಾಪಟು, ಖಾಸಗಿ ಕಾಲೇಜಿನ ವಿದ್ಯಾರ್ಥಿ ಚಿನ್ಮಯ್‌ ಗೌಡ ಮೃತ್ಯು

0
image_editor_output_image-1957110775-1731479519210.jpg

ಉಜಿರೆ : ಅಲ್ಪಕಾಲದ ಅಸೌಖ್ಯದಿಂದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಚಿನ್ಮಯ್‌ ಗೌಡ ಪಿ.ಕೆ ನಿಧನರಾಗಿದ್ದಾರೆ.

ಮಂಡ್ಯ ಮೂಲದ ಚಿನ್ಮಯ್‌ ಗೌಡ, ಹಾಸ್ಟೆಲ್‌ನಲ್ಲಿ ವಾಸವಿದ್ದು, ಅಲ್ಲಿಂದಲೇ ಕಾಲೇಜಿಗೆ ಹೋಗುತ್ತಿದ್ದರು. ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದ ಚಿನ್ಮಯ್‌ , ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ತಂದುಕೊಟ್ಟಿದ್ದರು.

ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಚಿನ್ಮಯ್‌ ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!