ಸಚಿವ ಝಮೀರ್ ಅಹ್ಮದ್‌ರಿಗೆ ಜೀವ ಬೆದರಿಕೆ: ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಯಿತು. ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕುಮಾರಸ್ವಾಮಿ ಅವರಿಗೆ ಮತ್ತೊಮ್ಮೆ ಕರಿಯ ಎಂದು ಕರೆದರೆ ನೀನು ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಗಡಿ ದಾಟುವುದಿಲ್ಲ. ನಾನೇ ನಿನಗೆ ಕೊನೆಯಾಡುತ್ತೇನೆ’ ಎಂದು ಸಚಿವ ಜಮೀರ್ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ. ಈ ಸಂಬಂಧ ಸಚಿವರ ಆಪ್ತ ಸಹಾಯ ಬಿ.ಎಸ್.ಅಶೋಕ್ ಅವರು ದೂರು ನೀಡಿದ್ದರು. ದೂರಿನ ಮೇರೆಗೆ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು.




