ಶಿಗ್ಗಾಂವಿ ಉಪಚುನಾವಣೆ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್ ಗಳು ಪತ್ತೆ
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದು ಮರುದಿನವೇ ಹಾವೇರಿ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ ಗಳು ಪತ್ತೆಯಾಗಿವೆ.
ಬುಧವಾರವಷ್ಟೇ ಶಿಗ್ಗಾಂವಿ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಿದೆ.
ಈ ವಿಚಾರವಾಗಿ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಶಿಗ್ಗಾಂವಿ ಉಪಚುನಾವಣೆಗೂ ಮತ್ತು ಈ ಬ್ಯಾಲೆಟ್ ಬಾಕ್ಸ್ಗಳಿಗೂ ಸಂಬಂಧ ಇಲ್ಲ. ಉಪಚುನಾವಣೆಯಲ್ಲಿ ಇವಿಎಂ ಬಳಸಲಾಗಿದೆ. ಈ ಬ್ಯಾಲೆಟ್ ಬಾಕ್ಸಗಳು ನಿರುಪಯಕ್ತವಾಗಿದ್ದವು. ಹಲವು ವರ್ಷಗಳಿಂದ ಬಳಕೆಯಾಗಿರಲಿಲ್ಲ. ಹೀಗಾಗಿ, ಎಪಿಎಂಸಿಯಲ್ಲಿರುವ ಒಂದು ಹಳೆ ಗೋದಾಮಿನಲ್ಲಿ ಇಡಲಾಗಿದೆ ಎಂದು ತಿಳಿಸಿದರು.