March 18, 2026

ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದಿದ್ದ ವ್ಯಕ್ತಿ ನಾಪತ್ತೆ

0
image_editor_output_image-1900201695-1731576586888.jpg

ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ವ್ಯಕ್ತಿಯೋರ್ವರು ವಿಚಿತ್ರವಾಗಿ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಜೀಪಮುನ್ನೂರು ಗ್ರಾಮದ ನಾಗವಳಚ್ಚಿಲ್ ನಿವಾಸಿಯಾಗಿರುವ ಉಗ್ಗಪ್ಪ (70) ಎಂಬವರು ಕಾಣೆಯಾದ ವ್ಯಕ್ತಿ.

ಪಾಣೆಮಂಗಳೂರು ಯೂನಿಯನ್ ಬ್ಯಾಂಕ್‌ಗೆ ಹೋಗಿ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದವರು ತನ್ನ ಸೊಸೆಗೆ ಮೊಬೈಲ್ ನಲ್ಲಿ ಕರೆ ಮಾಡಿ ಏನು ವಿಷಯವನ್ನು ತಿಳಿಸಿದಂತೆ ಕರೆಯನ್ನು ಕಟ್ ಮಾಡಿದ್ದಾರೆ. ನಂತರ ಸೊಸೆ ತಿರುಗಿ ಪೋನ್ ಮಾಡಿದಾಗ ಪೋನ್ ರಿಸೀವ್ ಮಾಡಿರಲಿಲ್ಲ.

ಉಗ್ಗಪ್ಪ ಪೂಜಾರಿ ಅವರು ಮೊಬೈಲ್ ನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೋಗಿರುವ ವಿಚಾರ ಬಳಿಕ ಗಮನಕ್ಕೆ ಬಂದಿದೆ. ನಂತರ ಇವರ ಮಗ ಅನಿಲ್ ಕುಮಾರ್ ಅವರು ಎಲ್ಲೆಡೆ ಹುಡುಕಾಟ ಮಾಡಿದರೂ ಪತ್ತೆಯಾಗದ ಹಿನ್ನೆಲೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!