ವಿಟ್ಲ: ಹೊರೈಝನ್ ಶಾಲೆ, ಮಕ್ಕಳ ದಿನಾಚರಣೆ
ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ದಿನಾಚರಣೆ ಉಪಾಧ್ಯಕ್ಷ ವಿ.ಕೆ.ಎಂ ಅಶ್ರಫ್ ಅಧ್ಯಕ್ಷತೆಯಲ್ಲಿ ನಡೆಯಿತು.
ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೊಟ್ಟು ಶುಭ ಹಾರೈಸಿದರು. ಶಾಲೆಯ ಕಾರ್ಯದರ್ಶಿ ನೋಟರಿ ಅಬೂಬಕರ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ, ಟ್ರಸ್ಟಿಗಳಾದ ಇಕ್ಬಾಲ್ ಶೀತಲ್, ಅಬ್ದುಲ್ ಹಮೀದ್ ಬದ್ರಿಯಾ, ಇಸಾಕ್ ಸಾಹೇಬ್, ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು, ಮಸೀದಿ ಕೋಶಾಧಿಕಾರಿ ಶರೀಫ್ ಪೊನ್ನೋಟು, ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ ಉಪಸ್ಥಿತರಿದ್ದರು.
ಶಿಕ್ಷಕಿ ಫರ್ಝಾನಾ ಸ್ವಾಗತಿಸಿ, ಚೇತನಾ ವಂದಿಸಿದರು. ರಾಹಿಸ್ತಾ ನಿರೂಪಿಸಿದರು.




