December 15, 2025

ಎಡಗಣ್ಣಿನ ಶಸ್ತ್ರಚಿಕಿತ್ಸೆಗೆ ಬಂದಿದ್ದ ಬಾಲಕನಿಗೆ ಬಲಗಣ್ಣಿನ ಶಸ್ತ್ರಚಿಕಿತ್ಸೆ  ಮಾಡಿದ ವೈದ್ಯರು

0
image_editor_output_image230110880-1731649952970.jpg

ಲಕ್ನೋ: ಎಡಗಣ್ಣಿನ ಶಸ್ತ್ರಚಿಕಿತ್ಸೆಗೆ ಹೋದ 7 ವರ್ಷದ ಬಾಲಕನಿಗೆ ವೈದ್ಯರು ಬಲಗಣ್ಣಿನ ಶಸ್ತ್ರಚಿಕಿತ್ಸೆ ಮಾಡಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ನ.12 ರಂದು ಸೆಕ್ಟರ್ ಗಾಮಾ 1 ರ ಆನಂದ್ ಸ್ಪೆಕ್ಟ್ರಮ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಬಾಲಕನ ಎಡಗಣ್ಣಿನಿಂದ ಆಗಾಗ ನೀರು ಬರುತ್ತಿತ್ತು. ಇದಕ್ಕಾಗಿ ಬಾಲಕನ ತಂದೆ ನಿತಿನ್ ಭಾಟಿ ಆತನನ್ನು ಆಸ್ಪತ್ರೆಗೆ ತೋರಿಸಿದ್ದರು. ವೈದ್ಯರು ತಪಾಸಣೆ ನಡೆಸಿದ ನಂತರ, ಬಾಲಕನ ಕಣ್ಣಿನಲ್ಲಿ ಪ್ಲಾಸ್ಟಿಕ್ ತರಹದ ವಸ್ತುವಿದೆ. ಅದನ್ನು ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದು ತಿಳಿಸಿದ್ದರು.

ಆಸ್ಪತ್ರೆಗೆ 45,000 ರೂ. ಹಣ ಪಾವತಿಸಿ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಬಳಿಕ ಬಾಲಕನನ್ನು ಮನೆಗೆ ಕರೆದುಕೊಂಡು ಬಂದ ಮೇಲೆ ಆತನ ತಾಯಿ ಬಲಗಣ್ಣಿನ ಶಸ್ತ್ರಚಿಕಿತ್ಸೆ ಮಾಡಿರುವುದನ್ನು ಗಮನಿಸಿದ್ದಾರೆ. ಮತ್ತೆ ವೈದ್ಯರನ್ನು ಸಂಪರ್ಕಿಸಿ ವಿಚಾರಿಸಿದಾಗ, ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!