March 18, 2026

ಕಾರ್ಕಳ: ಅಣ್ಣನ ತಿಥಿಗೆ ಬಂದಿದ್ದಾಗ ಕರೆಂಟ್ ಶಾಕ್: ತಂಗಿ ಸಾವು

0
image_editor_output_image-1278549701-1731660662006.jpg

ಕಾರ್ಕಳ: ಅಣ್ಣನ ಉತ್ತರಕ್ರಿಯೆ ಸಿದ್ದತೆ ವೇಳೆ ಕರೆಂಟ್ ಶಾಕ್ ಗೆ ತಂಗಿ ಸಾವನಪ್ಪಿದ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಲಲಿತಾ ಬೋಂಡ್ರ ಎಂದು ಗುರುತಿಸಲಾಗಿದೆ.

ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ‌ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಬೋಂಡ್ರ ಅವರು ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು. ಅದೇ ಸಂದರ್ಭದಲ್ಲಿ ಮನೆ ಹೊರಾಂಗಣದಲ್ಲಿ ಅಳವಡಿಸಲಾಗಿದ್ದ ಶಾಮಿಯಾನದ ಕಬ್ಬಿಣದ ಕಂಬವನ್ನು ಹಿಡಿಯುತ್ತಿದ್ದಂತೆ ಅವರು ವಿದ್ಯುತ್ ಅಘಾತಕ್ಕೊಳಗಾಗಿ ಘಟನಾ ಸ್ಥಳದಲ್ಲಿ ಕುಸಿದು ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ.

ಶಾಮೀಯಾನ ಅಳವಡಿಸಿದಾಗ ಅದರ ಕಬ್ಬಣದ ಕಂಬಕ್ಕೆ‌ ಟ್ಯೂಬ್ ಲೈಟ್ ಅಳವಡಿಸಲಾಗಿ ಅದರ ಮೂಲ ವಿದ್ಯುತ್ ಸೋರಿಕೆಯಾಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!