ಬಂಟ್ವಾಳ: ನಾಪತ್ತೆಯಾಗಿದ್ದ ವೃದ್ಧನ ಮೃತದೇಹ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆ
ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆಯಾದ ಮೃತದೇಹ ಅವರದ್ದೇ ಎಂದು ತಡವಾಗಿ ಬೆಳಕಿಗೆ ಬಂದಿದೆ.
ನಾಗವಳಚ್ಚಿಲ್ ನಿವಾಸಿ ಉಗ್ಗಪ್ಪ ಪೂಜಾರಿ (70) ಮೃತ ದುರ್ದೈವಿ. ಉಗ್ಗಪ್ಪ ಪೂಜಾರಿ ನ. 5ರಂದು ಪಾಣೆಮಂಗಳೂರಿನ ಬ್ಯಾಂಕ್‌ಗೆ ಹೋಗಿ ತನ್ನ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದಿದ್ದರು.
ಬಳಿಕ ತನ್ನ ಸೊಸೆಗೆ ಕರೆ ಮಾಡಿ ಏನು ವಿಷಯವನ್ನು ತಿಳಿಸಲು ಯತ್ನಿಸಿ ಕರೆಯನ್ನು ಕಟ್ ಮಾಡಿದ್ದಾರೆ. ಮತ್ತೆ ಸೊಸೆ ತಿರುಗಿ ಪೋನ್ ಮಾಡಿದಾಗ ಪೋನ್ ರಿಸೀವ್ ಮಾಡದೆ ನಾಪತ್ತೆಯಾಗಿದ್ದರು.




